Advertisement

ಉಡುಪಿಯ ವಸತಿ ಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ

ಉಡುಪಿ ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಸನಿಹದ ವಸತಿ ಗೃಹದಲ್ಲಿ ಕೊಠಡಿ ಪಡೆದುಕೊಂಡಿದ್ದ ವ್ಯಕ್ತಿಯೊಬ್ಬರು ಫ್ಯಾನಿಗೆ ಬಟ್ಟೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಜಿನ್ಸನ್ ಪಿ.ಎಂ ಎಂದು ಗುರುತಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಭರತೇಶ್, ಪಿಎಸ್‌ಐ ನಾರಾಯಣ ಹಾಗೂ ಎಎಸ್‌ಐ ವಿಜಯ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದರು.

ಇದೇ ವೇಳೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

ಘಟನೆ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions