Advertisement

ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್‌ಗೆ ಏಕಾಏಕಿ ಬೆಂಕಿ; ಸವಾರ ಪಾರು

ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್‌ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಸವಾರ ಕೂಡಲೇ ರಸ್ತೆ ಮಧ್ಯೆಯೇ ಸ್ಕೂಟರ್‌ ನಿಲ್ಲಿಸಿ ಅದರಿಂದ ದೂರ ಓಡಿ ಹೋಗಿದ್ದಾರೆ. ಸಮಯಪ್ರಜ್ಞೆಯಿಂದ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಬಳಿಕ ಸ್ಥಳೀಯರು ಸ್ಥಳಕ್ಕೆ ಧಾವಿಸಿ ನೀರು ಸುರಿದು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಬ್ಯಾಟರಿ ಅಥವಾ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿರಬಹುದೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions