ಕುಂದಾಪುರ ತಾಲೂಕಿನ ಗುಡ್ಡೆಯಂಗಡಿ ಪ್ರದೇಶದಲ್ಲಿರುವ “SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್”ನಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಡಾ. ಜಿ. ರಾಮಕೃಷ್ಣ ಆಚಾರ ಚಾರಿಟೇಬಲ್ ಟ್ರಸ್ಟ್ ಹಾಗೂ SKF Elixer India Pvt. Ltd ವತಿಯಿಂದ ಈ ತರಬೇತಿ ಕೇಂದ್ರವನ್ನು ನಿರ್ವಹಿಸಲಾಗುತ್ತಿದೆ.
ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉಚಿತ ತಾಂತ್ರಿಕ ತರಬೇತಿ ನೀಡುವ ಉದ್ದೇಶದಿಂದ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಆರಂಭಿಸಲಾಗಿದೆ.
ಕೇಂದ್ರದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕ್ – ರೆಫ್ರಿಜರೇಷನ್, ಎಸಿ ಮತ್ತು ಪ್ಲಂಬಿಂಗ್ ಸೇರಿದಂತೆ ಹಲವು ತಾಂತ್ರಿಕ ಕೋರ್ಸ್‌ಗಳಿಗೆ ತರಬೇತಿ ನೀಡಲಾಗುತ್ತದೆ. ಜೊತೆಗೆ ಫ್ಯಾಷನ್ ಡಿಸೈನ್ ಕೋರ್ಸ್ ಕೂಡ ಲಭ್ಯವಿದೆ.
ಪ್ರತಿ ಬ್ಯಾಚ್‌ಗೆ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ತರಬೇತಿ ಅವಧಿ ಒಂದು ವರ್ಷವಾಗಿರುತ್ತದೆ. ಫ್ಯಾಷನ್ ಡಿಸೈನ್ ಕೋರ್ಸ್‌ಗೆ ಆರು ತಿಂಗಳ ಅವಧಿ ನಿಗದಿಪಡಿಸಲಾಗಿದೆ. ತರಬೇತಿಯ ಜೊತೆಗೆ ಇಂಟರ್ನ್‌ಶಿಪ್ ಹಾಗೂ ಉದ್ಯೋಗ ಮಾರ್ಗದರ್ಶನ ವ್ಯವಸ್ಥೆಯೂ ಕಲ್ಪಿಸಲಾಗಿದೆ.
SSLC ಪಾಸ್ ಅಥವಾ ಫೇಲ್ ಆದವರು, PUC ಹಾಗೂ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 91874 92550 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions