ಉಡುಪಿ: ಕರ್ನಾಟಕ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಿರುವುದಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಸದಸ್ಯರಾದ ನವೀನ್ ಸಾಲಿಯಾನ್ ಅವರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ನಿಗಮ-ಮಂಡಳಿಗಳು ಹಾಗೂ ಪ್ರಮುಖ ಸರ್ಕಾರಿ ಹುದ್ದೆಗಳಿಗೆ ಒಟ್ಟು 18 ಶಾಸಕರು ಮತ್ತು ಮುಖಂಡರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ನೇಮಕಾತಿಗಳ ಪೈಕಿ ಮಂಜುನಾಥ ಭಂಡಾರಿ ಅವರಿಗೆ ವಿಧಾನಪರಿಷತ್ತಿನ ಮುಖ್ಯ ಸಚೇತಕರ ಜವಾಬ್ದಾರಿ ನೀಡಲಾಗಿದೆ.
ಮಂಜುನಾಥ ಭಂಡಾರಿ ಅವರ ನೇಮಕವು ಸಂತಸ ತಂದಿದ್ದು, ಅವರ ರಾಜಕೀಯ ಅನುಭವ ಹಾಗೂ ಸಂಘಟನಾ ಸಾಮರ್ಥ್ಯದ ಮೂಲಕ ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವಿದೆ. ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಜನಸೇವೆ ಮಾಡುವ ಅವಕಾಶಗಳು ದೊರೆಯಲಿ ಎಂದು ನವೀನ್ ಸಾಲಿಯಾನ್ ಅವರು ಶುಭ ಹಾರೈಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions