ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಸಾರ್ವಜನಿಕರ ಎದುರೇ ಮಾರಕಾಸ್ತ್ರದಿಂದ ಹತ್ಯೆಗೈದ ಘಟನೆಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಂತಹ ಅಮಾನವೀಯ ಕೃತ್ಯ ನಾಗರಿಕ ಸಮಾಜ ತಲೆತಗ್ಗಿಸುವಂತದ್ದಾಗಿದ್ದು, ಪ್ರಕರಣವನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ತ್ವರಿತ ತನಿಖೆ ನಡೆಸಿ ಆರೋಪಿಗೆ ಕಾನೂನಿನ ಅಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮೃತ ಲಾವಣ್ಯ ಅವರ ಕುಟುಂಬಕ್ಕೆ ಇದು ತುಂಬಲಾರದ ನಷ್ಟವಾಗಿದ್ದು, ಮಾನವೀಯ ನೆಲೆಯಲ್ಲಿ ಕರ್ನಾಟಕ ಸರ್ಕಾರ ₹1 ಕೋಟಿ ಪರಿಹಾರ ಘೋಷಿಸಬೇಕು. ಅಲ್ಲದೆ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಸೇರಿದಂತೆ ಅಗತ್ಯ ನೆರವು ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ದುಃಖದ ಸಂದರ್ಭದಲ್ಲಿ ರಾಜಕೀಯ, ಜಾತಿ ಹಾಗೂ ಧರ್ಮದ ಭೇದಗಳನ್ನು ಮೀರಿ ಎಲ್ಲರೂ ಮೃತೆಯ ಕುಟುಂಬದ ಬೆಂಬಲಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದ ಅವರು, ಅಪರಾಧಿಗೆ ಯಾವುದೇ ಧರ್ಮ ಅಥವಾ ಜಾತಿಯ ಗುರುತು ನೀಡದೆ ಕೇವಲ ಆರೋಪಿಯನ್ನಾಗಿ ಮಾತ್ರ ನೋಡಬೇಕು ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷ ಹರಡುವ ಪೋಸ್ಟ್‌ಗಳನ್ನು ಮಾಡುವವರ ವಿರುದ್ಧವೂ ಪೊಲೀಸ್ ಇಲಾಖೆ ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕೊನೆಯಲ್ಲಿ, ಮೃತ ಲಾವಣ್ಯ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅಜಿತ್ ಕುಮಾರ್ ಶೆಟ್ಟಿ ಪ್ರಾರ್ಥಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions