Advertisement

ಬಜಪೆ: ಇಂದಿರಾ ಕ್ಯಾಂಟೀನ್ ಗೆ ಚಾಲನೆ

ಬಜಪೆ ಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ದೀರ್ಘಕಾಲದ ನಿರೀಕ್ಷೆಯಂತೆ, ಇಲ್ಲಿ ನೂತನವಾಗಿ ಇಂದಿರಾ ಕ್ಯಾಂಟೀನ್ ನಿರ್ಮಾಣಗೊಂಡಿದೆ. ಬಡವರು ಮತ್ತು ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ದರದಲ್ಲಿ, ಅಚ್ಚುಕಟ್ಟಾದ ಪರಿಸರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶ.

ಬಜಪೆಯ ಈ ಹೊಸ ಕ್ಯಾಂಟೀನ್ ಇಂದಿನಿಂದ ಸಾರ್ವಜನಿಕ ಸೇವೆಗೆ ಲಭ್ಯವಿದ್ದು, ಹಸಿವು ಮುಕ್ತ ಸಮಾಜದತ್ತ ನಮ್ಮ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಬಜಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಮತ್ತಿತರರು ಇದ್ದರು.

ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮ ಜರುಗಿತು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions