Advertisement

ಉಪ‌‌ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಪಕ್ಷದ ಪಾಲಿಗೆ ಪ್ರತಿಷ್ಠೆಯಾಗಿದೆ. ನಮಗೆ ಗೆಲುವೇ ಮಾನದಂಡ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭೆ ಉಪ‌ ಚುನಾವಣೆ ಉಸ್ತುವಾರಿ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದಿನ ಸಭೆಯಲ್ಲಿ 8 ಜನರ ಹೆಸರು ಚರ್ಚೆ ಆಗಿದೆ ಎಂದರು.

ಜಿಲ್ಲಾ ಹಾಗೂ ತಾಲೂಕು ಪಂಚಾಯತ್, ಜಿಬಿಎ ಹಾಗೂ 2028ರ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ‌ಕೆಲಸ ಮಾಡಬೇಕಿದೆ. ಸಿಎಂ, ಡಿಸಿಎಂ‌ ಹೈಕಮಾಂಡ್ ಜೊತೆ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಸಚಿವರು ಹೇಳಿದರು.

ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ. ಹೆಸರು ಘೋಷಣೆ ಆದ ಮೇಲೆ ಗೊಂದಲ ಸರಿ ಹೋಗುತ್ತದೆ. ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ. ಯಾರೆ ಆಗಲಿ ಟಿಕೆಟ್ ಕೇಳೋದರಲ್ಲಿ ತಪ್ಪಿಲ್ಲ. ಟಿಕೆಟ್ ಘೋಷಣೆ ಬಳಿಕ ಎಲ್ಲರೂ ನಿರ್ಧಾರಕ್ಕೆ ಬದ್ದರಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions