ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಮೂರು ಸಾಕ್ಷಿಗಳ ಪಾಟಿ ಸವಾಲಿಗೆ ದಿನಾಂಕ ನಿಗದಿ ಪಡಿಸಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಪ್ರಕರಣದ ದೂರುದಾರೆ, ಆಕೆಯ ತಾಯಿ ಮತ್ತು ಆಟೋ ರಿಕ್ಷಾ ಚಾಲಕ ಅವರ ಮುಖ್ಯ ವಿಚಾರಣೆಯನ್ನು ಜೂ.19 ಮತ್ತು 20ರಂದು ನಡೆಸಲಾಗಿತ್ತು. ಈ ಸಾಕ್ಷಿಗಳ ಪಾಟಿ ಸವಾಲು ನಡೆಸಲು ಆ.21ರಂದು ದಿನಾಂಕ ನಿಗದಿ ಪಡಿಸಿ ನ್ಯಾಯಧೀಶ ಸಮೀವುಲ್ಲಾ ಆದೇಶ ನೀಡಿದರು.
ಈ ಸಂದರ್ಭದಲ್ಲಿ ಆರೋಪಿ ಪರ ವಕೀಲ ರಾಜು ಪೂಜಾರಿ ಅವರಿಗೆ ಪೊಲೀಸರು ಬಾಕಿ ಉಳಿದ ದೋಷಾ ರೋಪಣಾ ಪಟ್ಟಿಯ ದಾಖಲೆಗಳನ್ನು ಹಸ್ತಾಂತರಿಸಿದರು. ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ವಿಡಿಯೋ ಕಾನ್ಫ್‌ರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ಹಾಜರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions