ನೀಟ್ ಸೇರಿದಂತೆ ಪರೀಕ್ಷಾ ಅಕ್ರಮಗಳ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕರೆದ ಪ್ರತಿಭಟನೆಯಲ್ಲಿ ಬೆಂಬಲಿಗರೊಂದಿಗೆ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಸೇರಿಕೊಂಡಿದ್ದಾರೆ.
ಯುವಕರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪ್ರತಿಭಟನಾಕಾರರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ಶನಿವಾರ ಬೆಳಿಗ್ಗೆ ದಿಲ್ಲಿಗೆ ಆಗಮಿಸಿದ ದಿಪ್ಕೆ, ಶಿಸ್ತು ಕಾಪಾಡುವಂತೆ ಮತ್ತು ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದ್ದರು.
ಇದಕ್ಕೂ ಮೊದಲು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ದೀಪ್ಕೆ, ಜಂತರ್ ಮಂತರ್‌ನಲ್ಲಿ ಬೆಂಬಲಿಗರನ್ನು ಭೇಟಿಯಾಗುತ್ತಿರುವುದಕ್ಕೆ ಉತ್ಸಾಹ ವ್ಯಕ್ತಪಡಿಸಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸುವವರು ಒಂದು ಪುಸ್ತಕ ಮತ್ತು ರಾಷ್ಟ್ರಧ್ವಜವನ್ನು ತರಬೇಕೆಂದು ಕರೆ ನೀಡಿದ್ದರು. ಇದಲ್ಲದೆ ಕರ್ತವ್ಯ ನಿರತ ಪೊಲೀಸರಿಗೆ ಕೃತಜ್ಞತೆಯ ಸಂಕೇತವಾಗಿ ಹೂವುಗಳನ್ನು ನೀಡುವಂತೆ ಅವರು ಮನವಿ ಮಾಡಿದ್ದರು. ಈ ಚಳವಳಿಯನ್ನು ಪ್ರೀತಿ ಮತ್ತು ಶಾಂತಿಯ ಮಾರ್ಗದಲ್ಲಿ ಮುನ್ನಡೆಸಬೇಕು ಎಂದು ಹೇಳಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions