Advertisement

ಸಮಾಧಾನ ಮಹೋತ್ಸವಕ್ಕೆ ವಿರೋಧ ಖಂಡನೆ: ಸಾಮರಸ್ಯ ಹಾಳುಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ : ಶರ್ಫುದ್ದೀನ್ ಶೇಖ್

ದೇಶವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಎಲ್ಲಾ ಧರ್ಮ ಮತ್ತು ಜಾತಿಯವರಿಗೆ ಸಮಾನ ಹಕ್ಕುಗಳಿವೆ. ಈ ಹಿನ್ನಲೆಯಲ್ಲಿ ಕ್ರೈಸ್ತ ಸಮುದಾಯದವರು ತಮ್ಮ ಪವಿತ್ರ ತಿಂಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಸ್ವತಂತ್ರವಾಗಿ ಆಚರಿಸಲು ಸಂಪೂರ್ಣ ಹಕ್ಕು ಹೊಂದಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆಯಲಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮಕ್ಕೆ ಹೈಕೋರ್ಟ್ ಅನುಮತಿ ನೀಡಿರುವುದರಿಂದ, ಕಾನೂನುಬದ್ಧವಾಗಿ ಕಾರ್ಯಕ್ರಮ ನಡೆಸಲು ಯಾವುದೇ ಅಡ್ಡಿಯಿಲ್ಲ. ಆದಾಗ್ಯೂ, ಕೆಲವು ಸಂಘಟನೆಗಳು ಕಾರ್ಯಕ್ರಮವನ್ನು ತಡೆಯಲು ಮುಂದಾಗಿರುವುದು ಖಂಡನೀಯವಾಗಿದೆ ಎಂದು ಅವರು ಹೇಳಿದ್ದಾರೆ.

ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳ ಜನರು ತಮ್ಮ ಹಬ್ಬಗಳು ಮತ್ತು ಪವಿತ್ರ ದಿನಗಳನ್ನು ಆಚರಿಸುವ ಹಕ್ಕು ಹೊಂದಿದ್ದಾರೆ. ಇಂತಹ ಸಂದರ್ಭದಲ್ಲಿ ಕಾರ್ಯಕ್ರಮವನ್ನು ವಿರೋಧಿಸುವುದು ಸಮಾಜದಲ್ಲಿ ಅಶಾಂತಿ ಮತ್ತು ಸಾಮರಸ್ಯ ಭಂಗಕ್ಕೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಕಾರ್ಯಕ್ರಮವನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಉದ್ವಿಗ್ನತೆ ಉಂಟುಮಾಡಲು ಯತ್ನಿಸುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಬಂಧಿಸಿ ಕಾನೂನು ಪ್ರಕಾರ ಶಿಕ್ಷೆ ವಿಧಿಸಬೇಕು ಎಂದು ಶರ್ಫುದ್ದೀನ್ ಶೇಖ್ ಆಗ್ರಹಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions