ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ರಾಜೀವ ಭವನದಲ್ಲಿ ಸೌಹಾರ್ದ ಇಫ್ತಾರ್ ಕೂಟ ನಡೆಯಿತು.
ವಿನಯ್ ಕುಮಾರ್ ಸೊರಕೆ ಮಾತನಾಡಿ, ಎಲ್ಲಾ ಧರ್ಮಗಳ ಆಚರಣೆಗೂ ಗೌರವ ನೀಡುವುದು ಕಾಂಗ್ರೆಸ್ ಪಕ್ಷದ ಸಂಪ್ರದಾಯವಾಗಿದೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲ ಧರ್ಮಗಳ ಜನರ ನಡುವೆ ಪರಸ್ಪರ ಸೌಹಾರ್ದ ಮೂಡಿಸಿ, ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಇಫ್ತಾರ್ ಕೂಟ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿ ವರ್ಷ ಸೌಹಾರ್ದ ಇಫ್ತಾರ್ ಕೂಟ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.


ಕಾಪು ಲಕ್ಷ್ಮಿಜನಾರ್ದನ ದೇವಸ್ಥಾನದ ಪ್ರಧಾನ ತಂತ್ರಿ ಶ್ರೀಶ ತಂತ್ರಿ ಕಲ್ಯ, ಮಜೂರು ಬದ್ರಿಯಾ ಜಾಮಿಯಾ ಮಸೀದಿಯ ಧರ್ಮಗುರು ಅಬ್ದುಲ್ ರಶೀದ್ ಸಖಾಫಿ ಮಜೂರು, ಕಟಪಾಡಿ ಚರ್ಚ್ ಧರ್ಮಗುರು ಫಾ. ರಾಜೇಶ್ ಪ್ರಸನ್ನ ಕಟಪಾಡಿ ಸೌಹಾರ್ದ ಸಂದೇಶ ನೀಡಿದರು.
ಸದಸ್ಯತ್ವದ ಅವಧಿ ಪೂರ್ಣಗೊಂಡ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಸದಸ್ಯರನ್ನು ಅಭಿನಂದಿಸಲಾಯಿತು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕಾಪು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಜೆ. ಶೆಟ್ಟಿ, ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಜತ್ತನ್ನ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಶೇಖ್ ವಾಹಿದ್, ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಪುರ್ಟಾಡೊ, ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ವೇದಿಕೆ ಅಧ್ಯಕ್ಷ ವಿಶ್ವಾಸ್ ಅಮೀನ್, ಎಐಸಿಸಿ ಮಹಿಳಾ ಕಾರ್ಯದರ್ಶಿ ಜೇಬಾ ಸೆಲ್ವನ್, ಪಕ್ಷದ ಪ್ರಮುಖರಾದ ರಾಜೇಶ್ ರಾವ್ ಪಾಂಗಾಳ, ಶಾಂತಲತಾ ಶೆಟ್ಟಿ, ಹಸನಬ್ಬ ಶೇಕ್ ಶಿರ್ವ, ಮಹಮ್ಮದ್ ಸಾದಿಕ್ ದೀನಾರ್ ಉಪಸ್ಥಿತರಿದ್ದರು
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions