Advertisement

ವಿದ್ಯಾರ್ಥಿ ನಿಲಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣೆ, ಮಲೇರಿಯಾ ಪರೀಕ್ಷೆ

ನಮ್ಮ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ನಮ್ಮ ಕ್ಲಿನಿಕ್ ಉಡುಪಿ, ಕೆ.ಎಂ.ಸಿ. ಮಣಿಪಾಲದ ನೇತ್ರ ವಿಭಾಗ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಹಯೋಗದಲ್ಲಿ ವಿದ್ಯಾರ್ಥಿ ನಿಲಯಾರ್ಥಿಗಳಿಗಾಗಿ ಉಚಿತ ಕಣ್ಣಿನ ತಪಾಸಣೆ, ಮಲೇರಿಯಾ ಟೆಸ್ಟ್ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮವು ಸೆ.6ರಂದು ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, 76 ಬಡಗಬೆಟ್ಟು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಬೀಡಿನಗುಡ್ಡೆ ಉಡುಪಿ ಇಲ್ಲಿನ ನಿಲಯಾರ್ಥಿಗಳಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯದ ಅಧ್ಯಕ್ಷ ಹೆರಾಲ್ಡ್ ಸೋನ್ಸ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ಡನ್ ವಿನಾಯಕ್ ಅವರು ವಹಿಸಿದ್ದರು

ಈ ಸಂದರ್ಭದಲ್ಲಿ ನಿಲಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣೆ, ಮಲೇರಿಯಾ ಪರೀಕ್ಷೆ ಹಾಗೂ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು. ವೈದ್ಯಕೀಯ ಸಿಬ್ಬಂದಿ ನಿಲಯಾರ್ಥಿಗಳ ಆರೋಗ್ಯವನ್ನು ಪರಿಶೀಲಿಸಿ ಅಗತ್ಯ ಸಲಹೆಗಳನ್ನು ನೀಡಿದರು. ಶಿಬಿರದ ಪ್ರಯೋಜನವನ್ನು ನಿಲಯಾರ್ಥಿಗಳು ಪಡೆದುಕೊಂಡರು.

ನಿಲಯಾರ್ಥಿ ಸಿದ್ಧು ಸಂಗಮೇಶ ಮೇಟಿ ಸ್ವಾಗತಿಸಿ, ಕಾರ್ಯಕ್ರಮದ ಕೊನೆಯಲ್ಲಿ ವಂದಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions