ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಮಾರ್ಚ್ 13, 2026 ಶುಕ್ರವಾರ ಸಂಜೆ 4.30 ರಿಂದ 6.30 ಗಂಟೆಯವರೆಗೆ ಕಾಪುವಿನ ರಾಜೀವ್ ಭವನದಲ್ಲಿ ನಡೆಯಲಿದೆ.
ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶವನ್ನು ಬಲಪಡಿಸುವ ಉದ್ದೇಶದಿಂದ ಈ ಇಫ್ತಾರ್ ಕೂಟವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತರ ಘಟಕ ಸರ್ವ ಧರ್ಮಿಯರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions