Advertisement

ಬಂಟ್ವಾಳದಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಮೃತ್ಯು: ಸಚಿವ ಯು.ಟಿ. ಖಾದರ್ ಸಂತಾಪ

ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲೆಯ ಬಸ್ಸಿನ ಮೇಲೆ ಮರ ಬಿದ್ದ ಪರಿಣಾಮ ಓರ್ವ ಬಾಲಕಿ ದುರ್ಘಟನೆಯಲ್ಲಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುಃಖದ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ ಸಾಂತ್ವನ ಸೂಚಿಸಿದ್ದಾರೆ.

ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಭಾಗವಹಿಸಲು ವಿದೇಶ ಪ್ರವಾಸ ಕೈಗೊಂಡಿರುವ ಸಚಿವರು, ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.

ಇದಲ್ಲದೆ, ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಂಪೂರ್ಣ ಚಿಕಿತ್ಸೆ ವ್ಯವಸ್ಥೆಯನ್ನು ಸರಕಾರದ ವತಿಯಿಂದ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions