Advertisement

ಸೆಪ್ಟಂಬರ್ 6 ರಂದು ಅರಮನೆ ಮೈದಾನದಲ್ಲಿ ವಿದೇಶದಲ್ಲಿ ಅಧ್ಯಯನ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ಬೆಂ. ಗ್ರ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ವಿದೇಶದಲ್ಲಿ ಉನ್ನತ ವ್ಯಾಸಂಗ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ “ವಿದೇಶದಲ್ಲಿ ಅಧ್ಯಯನ 2026ರ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ ಗೇಟ್ ನಂಬರ್ 4ರಲ್ಲಿ ಸೆಪ್ಟಂಬರ್ 6ರಂದು ಬೆಳಿಗ್ಗೆ 9-30 ರಿಂದ ಸಂಜೆ 5ಗಂಟೆಯವರೆಗೆ ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ದೇಶಗಳು ಮತ್ತು 75ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿವೆ. ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆಗಳು, ವಿದ್ಯಾರ್ಥಿ ವೇತನ, ಹಣಕಾಸಿನ ಮಾರ್ಗದರ್ಶನ, ವಿದ್ಯಾರ್ಥಿ ವೀಸಾ, ಉದ್ಯೋಗವಕಾಶ ಹಾಗೂ ಮುಂತಾದ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು https://studyabroad.ksdckarnataka.com ವೆಬ್ ಸೈಟ್ ಮೂಲಕ ಸೆಪ್ಟಂಬರ್ 6, 2026ರೊಳಗಾಗಿ ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7338674791/7338674794/7338674798/7338674792 ಸಂಪರ್ಕಿಸಬಹುದು.ಷಕಾರ್ಯಕ್ರಮದಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಹಾಗೂ ಭಾಗವಹಿಸುವ ಅವಕಾಶವು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions