ಕುಂದಾಪುರದಿಂದ ಉಡುಪಿ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಬಲೆನೊ ಕಾರು, ತನ್ನ ಮುಂಭಾಗದಲ್ಲಿ ಚಲಿಸುತ್ತಿದ್ದ ಮತ್ತೊಂದು ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದೆ. ಈ ವೇಳೆ ನಿಯಂತ್ರಣ ತಪ್ಪಿದ ಕಾರು, ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಬಲೆನೊ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆಯಲ್ಲಿ ಮತ್ತೊಂದು ಕಾರಿಗೂ ಹಾನಿಯಾಗಿದೆಯಾದರೂ, ಅದೃಷ್ಟವಶಾತ್ ಅದರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಉಡುಪಿ ಸಂಚಾರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದರು. ಹೆದ್ದಾರಿಯ ಮಧ್ಯದಲ್ಲೇ ಅಪಘಾತ ಸಂಭವಿಸಿದ್ದರಿಂದ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಬಳಿಕ ಕ್ರೇನ್ ಮೂಲಕ ನಜ್ಜುಗುಜ್ಜಾದ ಕಾರನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಯಿತು.
ಅತಿ ವೇಗ ಹಾಗೂ ಅಜಾಗರೂಕ ಚಾಲನೆಯೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions