Advertisement

ಕನ್ನಡ ವೆಬ್‌ಸೈಟ್ “ದಿವ್ಯಜ್ಯೋತಿ” ಲೋಕಾರ್ಪಣೆ

ಬೆಂಗಳೂರು: ಚಿಂತಕರು ಹಾಗೂ ಬರಹಗಾರರಾದ ಮೌಲಾನಾ ಝಮೀರ್ ಅಹ್ಮದ್ ರಶಾದಿಯವರ ಸಂಪಾದಕತ್ವದಲ್ಲಿ ಆರಂಭಗೊಂಡಿರುವ ಕನ್ನಡ ವೆಬ್‌ಸೈಟ್ “ದಿವ್ಯಜ್ಯೋತಿ” ಯನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್, ರಾಜ್ಯ ಸಚಿವರು ಹಾಗೂ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ತಬ್ರೇಜ್ ಆಲಂ ಷರೀಫ್, ಸಾಹಿತಿ ಹಾಗೂ ಪ್ರಾಧಿಕಾರದ ಸದಸ್ಯರಾದ ಮುಷ್ತಾಕ್ ಹೆನ್ನಾಬೈಲ್, ಕರ್ನಾಟಕ ಮುಸ್ಲಿಮ್ ಬಾಂಧವ್ಯ ವೇದಿಕೆ ಕರ್ನಾಟಕದ ಅಧ್ಯಕ್ಷರಾದ ಝಾಕೀರ್ ಹುಸೇನ್ ಉಚ್ಚಿಲ ಸೇರಿದಂತೆ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

“ದಿವ್ಯಜ್ಯೋತಿ” ಕನ್ನಡ ವೆಬ್‌ಸೈಟ್ ಕನ್ನಡ ಭಾಷೆ, ಸಾಹಿತ್ಯ, ಸಮಾಜಮುಖಿ ಚಿಂತನೆಗಳು ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶವನ್ನು ಹೊಂದಿದ್ದು, ಕನ್ನಡ ಓದುಗರಿಗೆ ಹೊಸ ಚಿಂತನಾ ವೇದಿಕೆಯಾಗಲಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions