ಕಾರ್ಕಳ: ಕಾರ್ಕಳದ ಜನತೆಯ ಹಲವು ವರ್ಷಗಳ ಬೇಡಿಕೆಯಾಗಿದ್ದ ಯೋಜನಾ ಪ್ರಾಧಿಕಾರವನ್ನು ರಾಜ್ಯ ಸರ್ಕಾರವು ಕಾರ್ಕಳಕ್ಕೆ ಮಂಜೂರು ಮಾಡಿದ್ದು, ಇದು ಕ್ಷೇತ್ರದ ಜನತೆಯ ಪಾಲಿಗೆ ಅತ್ಯಂತ ಸಂತಸದ ಸಂಗತಿಯಾಗಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸಿ ಯೋಜನಾ ಪ್ರಾಧಿಕಾರ ಮಂಜೂರುಗೊಳಿಸಿ ಆದೇಶ ಹೊರಡಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಇದುವರೆಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಏಕ ವಿನ್ಯಾಸ ಅನುಮೋದನೆ, ಭೂ ಪರಿವರ್ತನೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗಾಗಿ ಕಾರ್ಕಳದ ಜನರು ಕಾಪು ಯೋಜನಾ ಪ್ರಾಧಿಕಾರ ಹಾಗೂ ಉಡುಪಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಇದೀಗ ಸರ್ಕಾರದ ನೂತನ ಆದೇಶದಿಂದ ಜನರಿಗೆ ಈ ಅಲೆದಾಟ ತಪ್ಪಲಿದ್ದು, ಬಹುದಿನಗಳ ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ.
ಅಗತ್ಯ ದಾಖಲೆಗಳನ್ನು ಪಡೆಯಲು ದೂರದ ಊರುಗಳಿಗೆ ತೆರಳಬೇಕಾದ ಅನಿವಾರ್ಯತೆಯೂ ಇನ್ನು ಮುಂದೆ ಕಡಿಮೆಯಾಗಲಿದೆ. ಯೋಜನಾ ಪ್ರಾಧಿಕಾರ ಮಂಜೂರಾತಿಯಿಂದ ಕಾರ್ಕಳದಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರಕ್ಕೆ ಹೊಸ ಚೈತನ್ಯ ದೊರೆಯಲಿದ್ದು, ಅಭಿವೃದ್ಧಿ ಚಟುವಟಿಕೆಗಳು ವೇಗ ಪಡೆದುಕೊಳ್ಳಲಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವುದರ ಜೊತೆಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳ ಸೃಷ್ಟಿಗೂ ಸಹಕಾರಿಯಾಗಲಿದೆ ಎಂದು ಉದಯ ಶೆಟ್ಟಿ ಮುನಿಯಾಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions