ಉಡುಪಿ ನಗರದ ಬ್ರಹ್ಮಗಿರಿ ವೃತ್ತದ ಸಮೀಪ ಲ್ಯಾಬ್ ಹಾಗೂ ಮೆಡಿಕಲ್ ಅಂಗಡಿಯ ಮುಂಭಾಗದಲ್ಲಿರುವ ಪಾದಚಾರಿ ಮಾರ್ಗದ ಕಾಂಕ್ರೀಟ್ ಸ್ಲ್ಯಾಬ್ ಜಾರಿರುವುದರಿಂದ ಸಾರ್ವಜನಿಕರಿಗೆ ಜೀವಾಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.
ನಗರದ ಪ್ರಮುಖ ಸಂಚಾರ ಪ್ರದೇಶಗಳಲ್ಲಿ ಒಂದಾಗಿರುವ ಈ ಸ್ಥಳದಲ್ಲಿ ಪ್ರತಿದಿನ ನೂರಾರು ಮಂದಿ ಓಡಾಡುತ್ತಿದ್ದು, ಜಾರಿರುವ ಕಾಂಕ್ರೀಟ್ ಸ್ಲ್ಯಾಬ್‌ನಿಂದ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಶಾಲಾ ಮಕ್ಕಳು ಸೇರಿದಂತೆ ಹಲವರು ಎಡವಿ ಬಿದ್ದು ಗಾಯಗೊಂಡಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಎಂ. ಇಕ್ಬಾಲ್ ಮನ್ನಾ ಅವರು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಕಾಂಕ್ರೀಟ್ ಸ್ಲ್ಯಾಬ್ ಅನ್ನು ಕೂಡಲೇ ದುರಸ್ತಿಪಡಿಸಿ, ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಬೇಕೆಂದು ಆಗ್ರಹಿಸಿದ್ದಾರೆ. ನಿರ್ಲಕ್ಷ್ಯ ಮುಂದುವರಿದಲ್ಲಿ ಯಾವುದೇ ಕ್ಷಣದಲ್ಲಿ ಗಂಭೀರ ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ತುರ್ತು ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions