ಕಾಪು ತಾಲೂಕಿನ ಮಲ್ಲಾರು ಪ್ರದೇಶದಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಗುಜರಿ ಗೋದಾಮು ಸ್ಫೋಟ ಪ್ರಕರಣದಲ್ಲಿ ಮೃತಪಟ್ಟ ನಾಲ್ವರು ಕಾರ್ಮಿಕರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಪರಿಹಾರಧನ ವಿತರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಹಾರದ ಚೆಕ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಮಂಜುನಾಥ್ ಭಂಡಾರಿ ಹಾಗೂ ಎಂ.ಎ. ಗಫೂರ್ ಉಪಸ್ಥಿತರಿದ್ದರು.
ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಒದಗಿಸಲು ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರಿಗೆ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದರು.
ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಹಾಗೂ ಉಸ್ಮಾನ್ ಕೊಪ್ಪಲಂಗಡಿ ಅವರ ಪ್ರಯತ್ನಕ್ಕೂ ಕುಟುಂಬಸ್ಥರು ಧನ್ಯವಾದ ತಿಳಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions