ಉಡುಪಿ: ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯ, ಶಿಕ್ಷಣ, ಉದ್ಯೋಗ, ಪ್ರವಾಸೋದ್ಯಮ, ಮೀನುಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಶಾಸಕ ಮಂಜುನಾಥ್ ಭಂಡಾರಿ ಅವರು ಕರಾವಳಿ ಸಚಿವ ಸಂಪುಟ ಸಭೆಯ ಮುಂದಿಟ್ಟಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ–ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಜಿತ್ ಶೆಟ್ಟಿ ತಿಳಿಸಿದ್ದಾರೆ.
ಕರಾವಳಿ ಭಾಗದ ಅಭಿವೃದ್ಧಿಯ ಬಗ್ಗೆ ಸದಾ ಕಾಳಜಿ ಹೊಂದಿರುವ ಮಂಜುನಾಥ್ ಭಂಡಾರಿ ಅವರು, ಕರಾವಳಿಯ ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿಯ ಅಗತ್ಯಗಳನ್ನು ಸರ್ಕಾರದ ಗಮನಕ್ಕೆ ನಿರಂತರವಾಗಿ ತರುತ್ತಿದ್ದಾರೆ. ಕರಾವಳಿಯ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಅಗತ್ಯವಿರುವ ಯೋಜನೆಗಳು, ವಿಶೇಷ ಅನುದಾನ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಅವರು ನೀಡುತ್ತಿರುವ ಒತ್ತು ಶ್ಲಾಘನೀಯವಾಗಿದೆ ಎಂದು ಅಜಿತ್ ಶೆಟ್ಟಿ ಹೇಳಿದ್ದಾರೆ.
ಕರಾವಳಿ ಕರ್ನಾಟಕವು ಶಿಕ್ಷಣ, ಉದ್ಯಮ, ಪ್ರವಾಸೋದ್ಯಮ, ಮೀನುಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಪ್ರದೇಶವಾಗಿದೆ. ಇಂತಹ ವಿದ್ಯಾವಂತ ಹಾಗೂ ಅಭಿವೃದ್ಧಿಶೀಲ ಕರಾವಳಿ ಭಾಗಕ್ಕೆ ಇನ್ನಷ್ಟು ವೇಗದ ಅಭಿವೃದ್ಧಿ ನೀಡಲು ಸಮರ್ಥ ನಾಯಕತ್ವದ ಅಗತ್ಯವಿದೆ.
ಕರಾವಳಿ ಭಾಗದ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಹೊಂದಿರುವ, ಸದಾ ಜನರ ಪರವಾಗಿ ಧ್ವನಿ ಎತ್ತುತ್ತಿರುವ ಶಾಸಕ ಮಂಜುನಾಥ್ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಿದರೆ, ಕರಾವಳಿ ಹಾಗೂ ವಿದ್ಯಾವಂತ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ ಎಂಬ ವಿಶ್ವಾಸ ನಮಗಿದೆ. ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಈ ವಿಚಾರವನ್ನು ಪರಿಗಣಿಸಿ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಅಜಿತ್ ಶೆಟ್ಟಿ ಮನವಿ ಮಾಡಿದ್ದಾರೆ.
ಕರಾವಳಿಯ ಅಭಿವೃದ್ಧಿಗಾಗಿ ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿದಂತೆ ಶಾಸಕ ಮಂಜುನಾಥ್ ಭಂಡಾರಿ ಅವರು ಮುಂದಿಟ್ಟಿರುವ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ, ಕರಾವಳಿ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions