ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡೆಯುವೆಯೂ ಭಾರತದಲ್ಲಿ ಇಂಧನ ಕೊರತೆ ಇಲ್ಲ ಆದ್ದರಿಂದ ನಮ್ಮ ಇಂಧನ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೆಂದ್ರ ಪೆಟ್ರೋಲಿಂ ಸಚಿವರು ಸ್ಪಷ್ಟಪಡಿಸಿರುವಾಗ ಕೇಂದ್ರ ಸರಕಾರವು ಗ್ರಹ ಬಳಕೆ* *ಸಿಲಿಂಡರ್ ಬೆಲೆಯನ್ನು ಏಕಾಏಕಿ 60 ರೂಪಾಯಿಗೆ ಹೆಚ್ಚಳ ಮಾಡಲಾಗಿದ್ದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 115 ರೂಪಾಯಿಗೆ ಏರಿಕೆ ಮಾಡಲಾಗಿದೆ, ಕಳೆದ 11 ತಿಂಗಳಲ್ಲಿ ಗ್ರಹ ಬಳಕೆಯ ಸಿಲಿಂಡರ್ ಬೆಲೆ ಒಟ್ಟು 110 ರೂ ಹೆಚ್ಚಳ ಮಾಡಿರುವುದು ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮೇಲೆ ಭಾರೀ ಬರೆ ಹಾಕಲಾಗಿದೆ ˌ ಈ ದರ ಏರಿಕೆಯಿಂದ ಗ್ರಹಬಳಕೆ ಗ್ರಾಹಕರು ಹಾಗೂ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ಭಾರಿ ಪರಿಣಾಮ ಉಂಟಾಗಲಿದೆˌ ಕೇಂದ್ರ ಸರಕಾರದ ಈ ಜನವಿರೋಧಿ ನೀತಿಗಳ ವಿರುದ್ಧ ತಾ 10 - 3 - 2026 ( ಮಂಗಳವಾರ ) ಬೆಳಿಗ್ಗೆ 10.00 ಗಂಟೆಗೆ ಉಡುಪಿ ಬ್ರಹ್ಮಗಿರಿ ಸರ್ಕಲ್ ಬಳಿ ಬ್ರಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ* *ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ರವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions