Advertisement

ಮೇ 17 (ಇಂದು) ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ನೂತನ ಕಚೇರಿ ಉದ್ಘಾಟನೆ

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೇ 17ರಂದು ಪಡುಬಿದ್ರಿಯಲ್ಲಿ ನಡೆಯಲಿದೆ.

ಸಂಜೆ 6 ಗಂಟೆಗೆ ಮೀರಾ ಕಾಂಪ್ಲೆಕ್ಸ್‌ನ ಅಪೋಲೋ ಮೆಡಿಕಲ್ ಸಮೀಪ ಗ್ರಾಮೀಣ ಕಾಂಗ್ರೆಸ್‌ನ ನೂತನ ಕಚೇರಿಯನ್ನು ಉದ್ಘಾಟಿಸಲಾಗುವುದು. ಬಳಿಕ ಸಂಜೆ 6.30ಕ್ಕೆ ಪಡುಬಿದ್ರಿ ಪೊಲೀಸ್ ಠಾಣೆ ಸಮೀಪದ ಸುಜಾತ ಆಡಿಟೋರಿಯಂನಲ್ಲಿ ನೂತನ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ್ ಪೂಜಾರಿ ವಹಿಸಲಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಹಾಗೂ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಅಧ್ಯಕ್ಷ ವೈ. ಸುಕುಮಾರ್, ಕೆಪಿಸಿಸಿ ಕೋ-ಆರ್ಡಿನೇಟರ್ ನವೀನ್‌ಚಂದ್ರ ಜೆ. ಶೆಟ್ಟಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ರಮೀಝ್ ಹುಸೇನ್ ಪದಗ್ರಹಣ ಮಾಡಲಿದ್ದು, ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸುನಂದಾ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಗಗನ್ ಕರ್ಕೇರ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮನ್ಸೂರ್ ಎಂ.ಎಸ್., ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷರಾಗಿ ವಿಠಲ್ ಮಾಸ್ಟರ್, ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾಗಿ ಅಶ್ವಿನ್ ಎಂ. ಕೋಟ್ಯಾನ್ ಹಾಗೂ ಎನ್‌ಎಸ್‌ಯುಐ ಘಟಕದ ಅಧ್ಯಕ್ಷರಾಗಿ ಮೊಹಮ್ಮದ್ ಸಿರಾಜ್ ಸೇರಿದಂತೆ ವಿವಿಧ ಬೂತ್ ಸಮಿತಿಗಳ ನೂತನ ಅಧ್ಯಕ್ಷರು ಪದಗ್ರಹಣ ಸ್ವೀಕರಿಸಲಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions