Advertisement

ಮಾ.14 ರಂದು ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡಕ್ಕೆ ಭೇಟಿ

ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾರ್ಚ್ 14 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಮಾರ್ಚ್ 14 ರಂದು ಬೆಳಿಗ್ಗೆ 9.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಬೆಳಿಗ್ಗೆ 10 ಗಂಟೆಗೆ ಮುಲ್ಕಿ ತಾಲ್ಲೂಕು ಆಡಳಿತ ಕೇಂದ್ರ “ಪ್ರಜಾಸೌಧ” ಉದ್ಘಾಟನೆ ಹಾಗೂ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಉರ್ವಸ್ಟೋರ್‌ನ ಅಂಬೇಡ್ಕರ್ ಭವನದಲ್ಲಿ ನಡೆಯುವ 2025ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3.15ಕ್ಕೆ ಮೂಡಬಿದ್ರೆ ನಗರಸಭೆಯ ವಾಣಿಜ್ಯ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಸಂಜೆ 4.30ಕ್ಕೆ ಬಜ್ಪೆ ಇಂದಿರಾ ಕ್ಯಾಂಟಿನ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಸಂಜೆ 5.50ಕ್ಕೆ ಸಚಿವರು ಮಂಗಳೂರುದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions