Advertisement

ವೈಕುಂಠ ಬಾಳಿಗ ಕಾನೂನು ಕಾಲೇಜಿನ NSS ವಿಶೇಷ ಶಿಬಿರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯ, ಉಡುಪಿ ಹಾಗೂ Karnataka State Law University ಜಂಟಿಯಾಗಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವಾರ್ಷಿಕ ವಿಶೇಷ ಶಿಬಿರದ 5ನೇ ದಿನದ ಕಾರ್ಯಕ್ರಮಕ್ಕೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ Kota Srinivas Poojary ಭೇಟಿ ನೀಡಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸಮಾಜ ಸೇವೆಯ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಎನ್‌ಎಸ್‌ಎಸ್ ಶಿಬಿರಗಳು ಯುವಜನರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಸಾಮಾಜಿಕ ಕಾಳಜಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಅವರು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ಸಮಾಜದ ವಾಸ್ತವ ಸ್ಥಿತಿಯನ್ನು ಅರಿಯಲು ಉತ್ತಮ ವೇದಿಕೆಯಾಗಿದ್ದು, ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಲ್ಲದೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿ, ಕಾರ್ಯಕ್ರಮದ ಯಶಸ್ಸಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಗೋಳಿಯಂಗಡಿಯ ಪ್ರಾಂಶುಪಾಲರಾದ ಮಂಜುನಾಥ್ ಪಟಗಾರ, ಜಯರಾಮ ಶೆಟ್ಟಿ, ಎನ್‌ಎಸ್‌ಎಸ್ ಅಧಿಕಾರಿಯಾದ ಡಾ. ನವೀನ್ ಚಂದ್ರ ಸಿಬಿ, ಕಾನೂನು ಮಹಾವಿದ್ಯಾಲಯ ವಿದ್ಯಾರ್ಥಿ ಮಂಡಳಿ ಅಧ್ಯಕ್ಷ ಶಮಂತ್, ಎನ್‌ಎಸ್‌ಎಸ್ ಕಾರ್ಯದರ್ಶಿಗಳಾದ ಸಮೀರ್, ಅಂಕಿತ, ರಕ್ಷಿತಾ ಹಾಗೂ ಸಂದೇಶ್ ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions