ಮಲ್ಲಾರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಹಾಗೂ ಪ್ರತಿಷ್ಠಿತ 51 ಬೀಡಿ ಕಂಪೆನಿಯ ಮಾಲಕರಾದ ನಸೀರ್ 51 ಕಾಪು ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾರ್ ಅವರು ನೇಮಕಾತಿ ಆದೇಶ ಪತ್ರವನ್ನು ನೀಡಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಸಾದು ಸ್ವಭಾವದವರಾಗಿರುವ ನಸೀರ್ 51 ಕಾಪು ಅವರು ಎಲ್ಲರೊಂದಿಗೂ ಉತ್ತಮ ಬಾಂಧ್ಯವ್ಯ ಹೊಂದಿರುವ ಸಮಾಜಮುಖಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೊದಲು ಅವರು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರು.
ಪಕ್ಷ ಸಂಘಟನೆಯಲ್ಲಿ ಉತ್ತಮ ಅನುಭವ ಹೊಂದಿರುವ ಅವರು ಮಲ್ಲಾರು ಭಾಗದಲ್ಲಿ ಸಾಕಷ್ಟು ಪ್ರಭಾವ ಮತ್ತು ಬೆಂಬಲವನ್ನು ಹೊಂದಿದ್ದಾರೆ. ಇವರ ನೇಮಕದಿಂದ ಮಲ್ಲಾರು ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಇನ್ನಷ್ಟು ಬಲವಾಗಲಿದೆ ಎಂದು ಪಕ್ಷದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions