ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಭುಗಿಲೆದ್ದಿದ್ದ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ತಲೆಬಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿಪಕ್ಷಗಳು ನಡೆಸುತ್ತಿದ್ದ ಸುದೀರ್ಘ ಬೃಹತ್ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದಾರೆ.*
*ರಾಜೀನಾಮೆ ಬಳಿಕ ಮಾತನಾಡಿದ ಧರ್ಮೇಂದ್ರ ಪ್ರಧಾನ್, "ದೇಶದ ಕೋಟ್ಯಂತರ ಯುವಕರ ಭವಿಷ್ಯವನ್ನು ಕಾಯುವುದು ಮತ್ತು ಕುಸಿದುಬಿದ್ದಿರುವ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸುವುದು ಪ್ರಸ್ತುತ ಸರ್ಕಾರದ ಮೊದಲ ಆದ್ಯತೆಯಾಗಿದೆ," ಎಂದಿದ್ದಾರೆ. ಇದೇ ವೇಳೆ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪವಿತ್ರ ಹೋರಾಟವನ್ನು ಕೆಲವು ದೇಶವಿರೋಧಿ ಹಾಗೂ ರಾಜಕೀಯ ಹಿತಾಸಕ್ತಿ ಶಕ್ತಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿಯೂ ಈ ನಿರ್ಧಾರಕ್ಕೆ ಬಂದಿರುವುದಾಗಿ ಸಮರ್ಥಿಸಿಕೊಂಡಿದ್ದಾರೆ.*
*ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ನೀಟ್ ಪರೀಕ್ಷೆಯಲ್ಲಾದ ಭಾರಿ ಲೋಪದೋಷಗಳು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದವು. ಈ ಪ್ರಕರಣವನ್ನು ಈಗಾಗಲೇ ಸಿಬಿಐ (CBI) ತನಿಖೆಗೆ ವಹಿಸಲಾಗಿದ್ದು, ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದ್ದ ಪ್ರತಿಭಟನಾಕಾರರಿಗೆ ಸಚಿವರ ಈ ನಡೆ ಕೊಂಚ ಸಮಾಧಾನ ತಂದಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಧೈರ್ಯಗೆಡದೆ ತಮ್ಮ ಅಭ್ಯಾಸದತ್ತ ಗಮನಹರಿಸಬೇಕು ಎಂದು ವಿನಂತಿಸಿರುವ ಮಾಜಿ ಸಚಿವರು, ಶೀಘ್ರದಲ್ಲೇ ಸತ್ಯಾಸತ್ಯತೆ ಹೊರಬರಲಿದೆ ಎಂದು ಭರವಸೆ ನೀಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions