ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಅವರು ಆಯ್ಕೆಯಾಗಿರುವುದು ಪಕ್ಷದ ಸಂಘಟನೆಗೆ ಹೊಸ ಶಕ್ತಿ ಹಾಗೂ ಚೈತನ್ಯ ನೀಡಲಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ–ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಜಿತ್ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯುವಕರನ್ನು ಒಗ್ಗೂಡಿಸಿ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಿಶನ್ ಹೆಗ್ಡೆ ಅವರ ನಾಯಕತ್ವ ಯಶಸ್ವಿಯಾಗಲಿ ಎಂದು ಅವರು ಶುಭ ಹಾರೈಸಿದ್ದಾರೆ.

ಕಾಂಗ್ರೆಸ್ ಪಕ್ಷದ ತತ್ವ–ಸಿದ್ಧಾಂತ ಹಾಗೂ ಕಾರ್ಯಕರ್ತರ ಶಕ್ತಿಯೊಂದಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಾಯ ಆರಂಭವಾಗಲಿ. ಅವರ ನಾಯಕತ್ವದಲ್ಲಿ ಪಕ್ಷ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ ಎಂದು ಅಜಿತ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
— ಅಜಿತ್ ಶೆಟ್ಟಿ
ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions