ಕಾರ್ಕಳ ತಾಲೂಕು ಮುಲ್ಲಡ್ಕ ಮುಂಡ್ಕೂರು ಗ್ರಾಮದ ನಾನಿಲ್ತಾರು ಕುಲಾಲ ಸಂಘದ ವಠಾರದಲ್ಲಿ ನಾನಿಲ್ತಾರು ದಿ. ಸುಂದರ ಮೂಲ್ಯ ಅಭಿಮಾನಿ ಬಳಗದ ವತಿಯಿಂದ ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದ ದಿ. ಸುಂದರ ಮೂಲ್ಯ ಅವರ ಸಂಸ್ಮರಣಾ ಕಾರ್ಯಕ್ರಮವು ಮೇ 23ರಂದು ಶನಿವಾರ ನಡೆಯಲಿದೆ ಎಂದು ಅಭಿಮಾನಿ ಬಳಗದ ಸಂಚಾಲಕ ಸುಕುಮಾರ್ ಸಾಲ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಸಂಜೆ 4 ಗಂಟೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ನೃತ್ಯ ವೈಭವ ಕೂಡ ಜರುಗಲಿದೆ. ಬಳಿಕ ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ, ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ರಾಮ್ ದಾಸ್ ಭಟ್, ಮುನಿಯಾಲು ಉದಯಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಸಂಸ್ಮರಣಾ ಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಬಳಿಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಬಳಗದ ಚಾಪರ್ಕ ಕಲಾವಿದರಿಂದ “ಎನ್ನನೇ ಕಥೆ” ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions