Advertisement

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಸ್ಕರ್ ಫೆರ್ನಾಂಡಿಸ್ ಜನ್ಮದಿನ ಆಚರಣೆ

ಮಾಜಿ ಕೇಂದ್ರ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರ ಜನ್ಮದಿನವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗೌರವಪೂರ್ವಕವಾಗಿ ಆಚರಿಸಲಾಯಿತು.

ಈ ಪ್ರಯುಕ್ತ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಹಂಚುವ ಮೂಲಕ ಮಾನವೀಯ ಸೇವಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬಳಿಕ ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಯಾದ ಆಸ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರ ಸ್ಮರಣಾರ್ಥ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ರಮಾನಾಥ್ ರೈ ಹಾಗೂ ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಅವರು ಮಾತನಾಡಿ, ದಿ. ಆಸ್ಕರ್ ಫೆರ್ನಾಂಡಿಸ್ ಅವರು ಪಕ್ಷಕ್ಕೆ ನೀಡಿದ ಅಪಾರ ಕೊಡುಗೆ, ಬಡವರ ಬಗ್ಗೆ ಹೊಂದಿದ್ದ ಕಾಳಜಿ ಮತ್ತು ಅವರ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಪ್ರತಾಪ್ ಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ದಿಶೇಶ್ ಹೆಗ್ಡೆ ಮೊಳಹಳ್ಳಿ, ಮಾರ್ಕ್ ಸಾಲ್ಡಾನಾ, ಕಿಶನ್ ಹೆಗ್ಡೆ, ಶರ್ಫುದ್ದೀನ್ ಶೇಖ್, ಡಾ. ಶೇಖ್ ವಹೀದ್ ದಾವೂದ್, ಪ್ರಶಾಂತ್ ಜತ್ತನ್ನ, ಜ್ಯೋತಿ ಹೆಬ್ಬಾರ್, ರಮೇಶ್ ಕಾಂಚನ್, ಸರಸು ಬಂಗೇರ, ಇಸ್ಮಾಯಿಲ್ ಆತ್ರಾಡಿ, ನಾಗೇಶ್ ಉದ್ಯಾವರ, ಮಹಾಬಲ ಕುಂದರ್ ಸೇರಿದಂತೆ ಅನೇಕ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions