ಹೆಜಮಾಡಿಯ ಪ್ರಬೋದ್ ಚಂದ್ರ ಅವರನ್ನು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾರ್ ಅವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.
ಪ್ರಬೋದ್ ಚಂದ್ರ ಅವರು ಈ ಹಿಂದೆ ಡಿಸಿಸಿ ಬ್ಯಾಂಕ್‌ನಲ್ಲಿ ಉಡುಪಿ ಜಿಲ್ಲೆಯ ವಿವಿಧ ಶಾಖೆಗಳಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಉತ್ತಮ ಆಡಳಿತ ಮತ್ತು ಸೇವೆಯಿಂದ ಗುರುತಿಸಿಕೊಂಡಿದ್ದಾರೆ. ತಮ್ಮ ಕರ್ತವ್ಯದ ಮೂಲಕ ಸಾವಿರಾರು ಮಂದಿಯ, ಎಲ್ಲಾ ಜಾತಿ–ಧರ್ಮದ ಜನರ ಪ್ರೀತಿ ಹಾಗೂ ಗೌರವಕ್ಕೆ ಪಾತ್ರರಾಗಿದ್ದಾರೆ.
ಇದೀಗ ಕಾಂಗ್ರೆಸ್ ಪಕ್ಷದ ತತ್ವ ಮತ್ತು ಸಿದ್ಧಾಂತಗಳನ್ನು ಹೆಜಮಾಡಿ ಭಾಗದಲ್ಲಿ ಬಲಪಡಿಸಿ ಪಕ್ಷವನ್ನು ಮತ್ತಷ್ಟು ಮುನ್ನಡೆಸುವ ಉದ್ದೇಶದಿಂದ ಅವರಿಗೆ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿ ನೀಡಲಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions