ಉಡುಪಿ ನಗರದ ಬ್ರಹ್ಮಗಿರಿಯಲ್ಲಿರುವ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷರಾಗಿದ್ದ ಶ್ರೀ ಆನಂದ ಪೂಜಾರಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಹುದ್ದೆಗೆ ಮೇ 26ರಂದು ಚುನಾವಣೆ ನಿಗದಿಯಾಗಿತ್ತು. ಈ ವೇಳೆ ರೆನೋಲ್ಡ್ ಪ್ರವೀಣ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾದರು.
ಪ್ರಸ್ತುತ ಅವರು ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿದ್ದು, ಈ ಹಿಂದೆ ಉಡುಪಿ ನಗರಸಭೆಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions