ನೀಟ್ ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಗುರುವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಪಾದಯಾತ್ರೆ ಮೂಲಕ ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ನಗರದ ಮಹಾವೀರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮಹಾವೀರ ವೃತ್ತದಿಂದ ಪಾದಯಾತ್ರೆ ಮೂಲಕ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿ ಕಡೆ ತೆರಳಿದರು. ಪೊಲೀಸರ ತಡೆ ನಡುವೆಯೂ ಬ್ಯಾರಿಕೇಡ್ ತಳ್ಳಿ ನುಗ್ಗಿದ ಪ್ರತಿಭಟನಾಕಾರರು, ಬಿಜೆಪಿ ಕಚೇರಿ ಆವರಣ ಪ್ರವೇಶಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಯತ್ನಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions