Advertisement

ಹಿಜಾಬ್‌ಗೆ ಅನುಮತಿ ನೀಡಿದ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ನೂತನ ಆದೇಶವನ್ನು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಘಟಕ ಹೃತ್ಪೂರ್ವಕವಾಗಿ ಸ್ವಾಗತಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಡಾ. ಮಹಮ್ಮದ್ ಸಾದ್ ಬೆಗ್ಗಾಮಿ, ಸರ್ಕಾರದ ಈ ನಿರ್ಧಾರವು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕು ಮತ್ತು ಸಾಂವಿಧಾನಿಕ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಹಿಜಾಬ್ ವಿವಾದದ ಪರಿಣಾಮ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿನಿಯರು ಶಿಕ್ಷಣದಿಂದ ದೂರವಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಸರ್ಕಾರವು 2022ರ ಫೆಬ್ರವರಿ 5ರ ವಿವಾದಾತ್ಮಕ ಆದೇಶವನ್ನು ಹಿಂಪಡೆದು, ಹಿಜಾಬ್ ಧರಿಸಲು ಅವಕಾಶ ನೀಡಿರುವುದು ಸಾಮಾಜಿಕ ನ್ಯಾಯಕ್ಕಾಗಿ ನಡೆದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪೇಟ, ಜನಿವಾರ ಹಾಗೂ ರುದ್ರಾಕ್ಷಿಯಂತೆಯೇ ಹಿಜಾಬ್‌ಗೂ ಸಮಾನ ಸ್ಥಾನಮಾನ ನೀಡಿರುವುದು ಭಾರತದ ಬಹುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳು ಯಾವುದೇ ತಾರತಮ್ಯವಿಲ್ಲದೆ ಸರ್ಕಾರದ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತಂದು, ವಿದ್ಯಾರ್ಥಿನಿಯರು ಯಾವುದೇ ಆತಂಕವಿಲ್ಲದೆ ಶಿಕ್ಷಣ ಮುಂದುವರಿಸಲು ಸೌಹಾರ್ದಯುತ ವಾತಾವರಣ ನಿರ್ಮಿಸಬೇಕೆಂದು ಜಮಾಅತೆ ಇಸ್ಲಾಮೀ ಹಿಂದ್ ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ಮನವಿ ಮಾಡಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions