Advertisement

ರಾಜ್ಯಗಳಿಗೆ ತಮ್ಮದೇ ಪ್ರವೇಶ ವ್ಯವಸ್ಥೆ ನಿರ್ಧರಿಸುವ ಹಕ್ಕು ಇರಲಿ: ಕೋಟ ನಾಗೇಂದ್ರ ಪುತ್ರನ್

ಉಡುಪಿ: NEET ಪರೀಕ್ಷಾ ವ್ಯವಸ್ಥೆಯಲ್ಲಿನ ಗೊಂದಲಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದ್ದು, ಕರ್ನಾಟಕದಲ್ಲಿ ಯಶಸ್ವಿಯಾಗಿ ನಡೆಯುತ್ತಿರುವ CET ಮಾದರಿಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ಕೋಟ ನಾಗೇಂದ್ರ ಪುತ್ರನ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, “NEET ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣ ಮಾಡುವ ವ್ಯವಸ್ಥೆಯಾಗಬೇಕಾಗಿತ್ತು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಅದು ವಿದ್ಯಾರ್ಥಿಗಳ ಕನಸುಗಳನ್ನು ನಾಶ ಮಾಡುವ ವ್ಯವಸ್ಥೆಯಾಗಿ ಪರಿಣಮಿಸಿದೆ. ಪ್ರಶ್ನೆಪತ್ರಿಕೆ ಲೀಕ್, ಪರೀಕ್ಷೆ ರದ್ದು, ಮರುಪರೀಕ್ಷೆ ಇವುಗಳಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ” ಎಂದು ಹೇಳಿದ್ದಾರೆ.

“ವರ್ಷಪೂರ್ತಿ ಶ್ರಮಪಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ. ಹಣವಿರುವವರಿಗೆ ಅಡ್ಡದಾರಿ ಸಿಗುತ್ತಿದ್ದು, ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಮಾತ್ರ ಕಠಿಣ ಹೋರಾಟದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದ್ದಾರೆ.

ಶಿಕ್ಷಣವು ರಾಜ್ಯಗಳ ಹಕ್ಕಾಗಿದ್ದು, ಕೇಂದ್ರ ಸರ್ಕಾರ NEET ಮೂಲಕ ಎಲ್ಲಾ ರಾಜ್ಯಗಳ ಮೇಲೂ ಒಂದೇ ಮಾದರಿಯ ನಿಯಂತ್ರಣ ಹೇರುವ ಪ್ರಯತ್ನ ಮಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳ ವೈವಿಧ್ಯಮಯ ಶೈಕ್ಷಣಿಕ ಪರಿಸ್ಥಿತಿಗೆ ಧಕ್ಕೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

“ಕರ್ನಾಟಕದ CET ವ್ಯವಸ್ಥೆ ವರ್ಷಗಳಿಂದ ಪಾರದರ್ಶಕ ಹಾಗೂ ನ್ಯಾಯಯುತವಾಗಿ ನಡೆಯುತ್ತಿದ್ದು, ಗ್ರಾಮೀಣ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿಸಿದೆ. ಯಾವುದೇ ದೊಡ್ಡ ಗೊಂದಲಗಳಿಲ್ಲದೆ ಯಶಸ್ವಿಯಾಗಿ ಪರೀಕ್ಷೆ ನಡೆಸುತ್ತಿರುವುದು CET ವಿಶೇಷತೆ” ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ NEET ವ್ಯವಸ್ಥೆಯನ್ನು ಮರುಪರಿಶೀಲಿಸಿ, ರಾಜ್ಯಗಳಿಗೆ ತಮ್ಮದೇ ಪ್ರವೇಶ ವ್ಯವಸ್ಥೆ ನಿರ್ಧರಿಸುವ ಹಕ್ಕು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions