Advertisement

24 ವರ್ಷಗಳಿಂದ ರಸ್ತೆಗಾಗಿ ಹೋರಾಟ: ಬೈಂದೂರಿನಲ್ಲಿ ಬುಖಾರಿ ಕಾಲೋನಿ ನಿವಾಸಿಗಳ ಪ್ರತಿಭಟನೆ

ಬೈಂದೂರು: ಶಿರೂರು ಗ್ರಾಮದ ವಾರ್ಡ್‌ ಸಂಖ್ಯೆ 2ರ ಬುಖಾರಿ ಕಾಲೋನಿಯಲ್ಲಿ ಕಳೆದ 24 ವರ್ಷಗಳಿಂದ ರಸ್ತೆ ನಿರ್ಮಾಣವಾಗದೆ ಇರುವುದನ್ನು ಖಂಡಿಸಿ ಬುಖಾರಿ ಕಾಲೋನಿ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಕಳೆದ ಹಲವು ವರ್ಷಗಳಿಂದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಬೈಂದೂರು ಕ್ಷೇತ್ರದ ನಾಯಕರಿಗೆ ಹಲವು ಬಾರಿ ಮನವಿ ಸಲ್ಲಿಸಿ, ರಸ್ತೆ ನಿರ್ಮಿಸಿಕೊಡುವಂತೆ ಒತ್ತಾಯಿಸಲಾಗಿದೆ. ಆದರೆ ಇದುವರೆಗೆ ಕೇವಲ ಆಶ್ವಾಸನೆಗಳು ಮಾತ್ರ ದೊರೆತಿದ್ದು, ರಸ್ತೆ ನಿರ್ಮಾಣದ ಬೇಡಿಕೆ ಈಡೇರಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಕುರಿತು ಮಾತನಾಡಿದ ಪ್ರತಿಭಟನಾಕಾರರು, “24 ವರ್ಷಗಳಿಂದ ರಸ್ತೆಗಾಗಿ ಮನವಿ ಮಾಡುತ್ತಿದ್ದೇವೆ. ಭರವಸೆ ಹಾಗೂ ಹಾರಿಕೆ ಉತ್ತರಗಳನ್ನು ಕೇಳಿ ಕೇಳಿ ಸಾಕಾಗಿದೆ. ಇನ್ನು ರಸ್ತೆ ನಿರ್ಮಾಣವಾಗದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಚ್.ಎಸ್. ಸಿದ್ದೀಕ್, ಪಟ್ಗಾರ್ ಶಕೀಲ್, ಶಾನು ಖಾಲೀದ್, ಫಾಹೀಕ್ ಖಾನ್, ಅಬ್ದುಲ್ ರಝಾಕ್ ಹಾಗೂ ಅನ್ವರ್ ಶಿರೂರ್ ಮಾತನಾಡಿದರು. ಎಂ.ಎಂ. ಮುಸ್ತಕೀಮ್ ಉಪಸ್ಥಿತರಿದ್ದರು.

ಬುಖಾರಿ ಕಾಲೋನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೇಕ್ ಸಯ್ಯಿದ್, ಉಪಾಧ್ಯಕ್ಷ ಎಂ.ಎಂ. ಖಾಜಾ ಹಾಗೂ ಕಾರ್ಯದರ್ಶಿ ಅಬ್ದುಲ್ ಹಮೀದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions