ಯುವ ನಾಯಕ ಹಾಗೂ ಉದ್ಯಮಿ ಆಗಿರುವ ಉಚ್ಚಿಲ ಗ್ರಾಮದ ಸುಕುಮಾರ್ ಬಂಗೇರ ಅವರನ್ನು ಉಚ್ಚಿಲ ಬಡಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾರ್ ಅವರು ನೇಮಕಾತಿ ಆದೇಶ ಪತ್ರವನ್ನು ನೀಡಿ ಘೋಷಿಸಿದರು.
ಸುಕುಮಾರ್ ಬಂಗೇರ ಅವರು ಈ ಮೊದಲು ಉಚ್ಚಿಲ ಬಡಾ ಬೂತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಶ್ರಮಪಟ್ಟು ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಪಕ್ಷದ ಸಿದ್ಧಾಂತಗಳಿಗೆ ನಿಷ್ಠೆಯಿಂದ ಕೆಲಸ ಮಾಡುತ್ತಿರುವ ಅವರ ಸೇವೆಯನ್ನು ಪರಿಗಣಿಸಿ ಅವರಿಗೆ ಉಚ್ಚಿಲ ಬಡಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions