ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ವಿವಿಧ ಸರ್ಕಾರಿ ಶಾಲೆಗಳ ನಾಲ್ವರು ಮುಖ್ಯ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕರಂಬಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಾವಿತ್ರಿ ದಿವಾಕರ್, ದೊಡ್ಡಣಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನಿರ್ಮಲಾ, ಹನುಮಂತ ನಗರದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಲ್ಲಿಕಾ ಹಾಗೂ ಮೂಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಲತಾ ಗ್ಲಾಡಿಸ್ ಅಮನ್ನಾ ಅವರನ್ನು ಶಿಕ್ಷಕರ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಅಧ್ಯಕ್ಷ ವಿನಯ್ ಕುಮಾರ್ ಪೂಜಾರಿ, ಸೆಂಟ್ರಲ್ ಕಮಿಟಿ ಸದಸ್ಯ ದಿನಕರ್ ಅಮೀನ್, ಡೈರೆಕ್ಟರ್‌ಗಳಾದ ಡಯಾನಾ ಸುಪ್ರಿಯಾ, ಸಮಿತ್ ಶೆಟ್ಟಿ, ದಯಾನಂದ ಶೆಟ್ಟಿ, ಗಣೇಶ್ ಉರಾಲ್, ವಾದಿರಾಜ್ ಸಾಲ್ಯಾನ್, ರೇಖಾ ಪೈ, ಟೀನಾ ಕುಂದರ್, ಮಾಜಿ ಅಧ್ಯಕ್ಷರಾದ ಎಂ. ಇಕ್ಬಾಲ್ ಮನ್ನಾ, ರಾಜೇಶ್ ಶೆಟ್ಟಿ, ಜಗದೀಶ್ ಅಮೀನ್, ವಿನ್ಸೆಂಟ್ ಸಲ್ದಾನ ಸೇರಿದಂತೆ ಹಲವಾರು ಸದಸ್ಯರು ಉಪಸ್ಥಿತರಿದ್ದರು. ಗಣೇಶ್ ಉರಾಲ್ ಸ್ವಾಗತಿಸಿದರು. ದಯಾನಂದ ಶೆಟ್ಟಿ ವಂದಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions