Advertisement

ಪಾಂಗಾಳ ಆರ್ಯಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನೂತನ ‘ಶ್ರೀ ಜನಾರ್ದನ ಸಭಾಭವನ’ ನಾಳೆ ಲೋಕಾರ್ಪಣೆ

ಆರ್ಯಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸುಸಜ್ಜಿತ ಹವಾನಿಯಂತ್ರಿತ ‘ಶ್ರೀ ಜನಾರ್ದನ ಸಭಾಭವನ’ದ ಲೋಕಾರ್ಪಣೆ ಕಾರ್ಯಕ್ರಮ ನವೆಂಬರ್ 19ರ ಗುರುವಾರ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 6.30ರಿಂದ ಶ್ರೀ ದೇವರಿಗೆ ನವಕ ಪ್ರಧಾನ, ಗಣಹೋಮ ಹಾಗೂ ವಾಸ್ತು ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ. ಮಧ್ಯಾಹ್ನ ಮಹಾಪೂಜೆಯ ಬಳಿಕ 12.30ಕ್ಕೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಸಂಜೆ 5.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನೂತನ ಸಭಾಭವನ ಹಾಗೂ ಲಿಫ್ಟ್ ಉದ್ಘಾಟನೆ ನೆರವೇರಲಿದೆ. ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ. ಮೋಹನದಾಸ ಭಟ್ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಎಂಆರ್‌ಜಿ ಗ್ರೂಪ್ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಉದ್ಘಾಟನೆ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವೈಭವ್ ವೇದ ಗ್ರೀನ್ ವೆಂಚರ್ಸ್ ಪ್ರೈ.ಲಿ.ಯ ಸಿಎಂಡಿ ಡಾ. ಎಂ. ನವೀನ್ ಕುಮಾರ್, ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ, ಜಯರಾಜ್ ಹೆಗ್ಡೆ, ನಿವೃತ್ತ ಬ್ಯಾಂಕ್ ಅಧಿಕಾರಿ ಪಿ. ಶ್ರೀನಿವಾಸ ಭಟ್, ಇನ್ನಂಜೆ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಹಾಗೂ ಗೋವಿಂದ ಶೆಟ್ಟಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದ ಸಾಂಸ್ಕೃತಿಕ ಅಂಗವಾಗಿ ರಾತ್ರಿ 7.30ಕ್ಕೆ ತುಳು ಜಾನಪದ ನಾಟಕ ‘ಕಾಡಗಗ್ಗರ’ ಪ್ರದರ್ಶನಗೊಳ್ಳಲಿದೆ.

ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪೂರಕವಾಗಿ ನಿರ್ಮಿಸಲಾಗಿರುವ ನೂತನ ಸಭಾಭವನದ ಲೋಕಾರ್ಪಣೆ ಸಮಾರಂಭದಲ್ಲಿ ಊರ ಹಾಗೂ ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions