Advertisement

ಗ್ರಾಮೀಣ ಜನರ ಉದ್ಯೋಗ ಹಕ್ಕಿಗೆ ಧಕ್ಕೆ: ಕಾಪು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕೇಂದ್ರ ಬಿಜೆಪಿ ಸರ್ಕಾರ ಮಹಾತ್ಮ ಗಾಂಧಿಯವರ ಹೆಸರಿನಲ್ಲಿ ಜಾರಿಯಲ್ಲಿದ್ದ ಮಹತ್ವದ ಮನರೇಗಾ ಯೋಜನೆಯನ್ನು ಹಿಂಪಡೆಯುವ ಮೂಲಕ ಗ್ರಾಮೀಣ ಜನರ ಬದುಕಿಗೆ ದಕ್ಕೆಯುಂಟು ಮಾಡುತ್ತಿದೆ ಎಂದು ಆರೋಪಿಸಿ, ಇಂದು ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿವಿಧ ಪಂಚಾಯತ್ ಕೇಂದ್ರಗಳ ಎದುರು ಪ್ರತಿಭಟನೆ ನಡೆಸಲಾಯಿತು.

ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಉಚ್ಚಿಲ, ಎಲ್ಲೂರು ಮತ್ತು ಮುದರಂಗಡಿ ಪಂಚಾಯತ್ ಕಚೇರಿಗಳ ಎದುರು ಈ ಪ್ರತಿಭಟನೆ ಕಾರ್ಯಕ್ರಮಗಳು ನಡೆಯಿತು.

ಗ್ರಾಮೀಣ ಬಡವರಿಗೆ ಉದ್ಯೋಗ ಭದ್ರತೆ ಒದಗಿಸಿದ್ದ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕ್ರಮ ಜನ ವಿರೋಧಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವೈ. ಸುಕುಮಾರರ್, ಮಹಾತ್ಮ ಗಾಂಧಿಯವರ ತತ್ವಗಳಿಗೆ ವಿರುದ್ಧವಾಗಿ ಬಿಜೆಪಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಿಯಾಜ್ ಪಡುಬಿದ್ರಿ ಸೇರಿದಂತೆ ಪಕ್ಷದ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನೆಯ ಮೂಲಕ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆದು, ಮನರೇಗಾ ಯೋಜನೆಯನ್ನು ಪುನರ್‌ಸ್ಥಾಪಿಸಬೇಕೆಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿತು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions