ಪವಿತ್ರ ರಮಝಾನ್ ತಿಂಗಳ ಉಪವಾಸ ಸಮಾಪ್ತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈದುಲ್ ಫಿತ್ರ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆ ನೀಡಿದ್ದಾರೆ.
ಇಂದು (ಮಾ.19) ಗುರುವಾರ ಸೂರ್ಯಾಸ್ತದ ನಂತರ ಶವ್ವಾಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಶವ್ವಾಲ್ 1ರಂದು ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲು ತೀರ್ಮಾನಿಸಲಾಗಿದೆ.
ಈ ಕುರಿತು ಪ್ರಕಟಣೆ ನೀಡಿದ ಹಾಜಿ ಎಸ್.ಎಂ. ರಶೀದ್, ಕೊಶಾಧಿಕಾರಿ, ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿ, ಮಂಗಳೂರು ಅವರು, ಎಲ್ಲರೂ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ಮನೋಭಾವದೊಂದಿಗೆ ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲೆ
"ಉಡುಪಿ, ಮಾ.19: ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಇಂದು ಮುಸ್ಸಂಜೆ ಆಗಿರುವುದರಿಂದ ಕರಾವಳಿಯಲ್ಲಿ ಶುಕ್ರವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ ಜಿಲ್ಲಾ ನಾಯಿಬ್ ಖಾಝಿ ಉಸ್ತಾದ್ ಬಿ ಕೆ ಅಬ್ದುರ್ರಹ್ಮಾನ್ ಮದನಿ ಮೂಳೂರು ಕರೆ ನೀಡಿದ್ದಾರೆ ಎಂದು ಉಡುಪಿ ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ ಬಾವು ಮೂಳೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ."
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions