.ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ 294ನೇ ಭಾನುವಾರದ ಸ್ವಚ್ಛತಾ ಅಭಿಯಾನವನ್ನು ಕೋಟದ ಮಣೂರು ಹಾಗೂ ಹರ್ತಟ್ಟು ಭಾಗದ ರಾಷ್ಟ್ರಿಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ ಮೂಲಕ ಹಮ್ಮಿಕೊಳ್ಳಲಾಯಿತು.
ಈ ಸ್ವಚ್ಛತಾ ಕಾರ್ಯಕ್ರಮಕ್ಕೆ ನಿವೃತ್ತ ಬಿಎಸ್‌ಎನ್‌ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ ಚಾಲನೆ ನೀಡಿದರು. ಈ ವೇಳೆ ಹೆದ್ದಾರಿಯ ಸುಮಾರು ಒಂದೂವರೆ ಕಿಲೋಮೀಟರ್ ವ್ಯಾಪ್ತಿಯಲ್ಲಿ ಹರಡಿಕೊಂಡಿದ್ದ ಹೆಚ್ಚಿನ ಪ್ರಮಾಣದ ತ್ಯಾಜ್ಯವನ್ನು ಸ್ವಯಂಸೇವಕರು ತೆರವುಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣುಮೂರ್ತಿ ಮಯ್ಯ, ರಾಷ್ಟ್ರಿಯ ಹೆದ್ದಾರಿಯಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಸ್ಥಳೀಯ ಆಡಳಿತವು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಂಘಟನೆಗಳು ಪ್ರತೀ ಬಾರಿ ಸ್ವಚ್ಛತಾ ಕಾರ್ಯ ನಡೆಸಿದರೂ ಪುನಃ ತ್ಯಾಜ್ಯ ಎಸೆಯುವ ಘಟನೆಗಳು ನಡೆಯುತ್ತಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಇದನ್ನು ತಡೆಯಲು ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಕೂಡ ಅವರು ಸಲಹೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಚಿತ್ತಾರಿ ಟ್ರಸ್ಟ್‌ನ ಗೋಪಾಲ್ ಪೈ, ಪಂಚವರ್ಣ ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಂಚಾಲಕಿ ಸುಜಾತ ಬಾಯರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಗೀತಾನಂದ ಫೌಂಡೇಶನ್ ಮಣೂರು, ಹಂದಟ್ಟು ಮಹಿಳಾ ಬಳಗ, ಫ್ರೆಂಡ್ಸ್ ಹಾಗೂ ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು. ಕೋಟ ಗ್ರಾಮ ಪಂಚಾಯತ್ ಹಾಗೂ ಎಸ್‌ಎಲ್‌ಆರ್‌ಎಂ ಘಟಕ ಸಹಕಾರ ನೀಡಿತು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions