Advertisement

ಉಡುಪಿ | ಗ್ರಾಮೀಣ ಯುವಕರಿಗೆ ಉಚಿತ ತಾಂತ್ರಿಕ ತರಬೇತಿ

ಗ್ರಾಮೀಣ ಭಾಗದ ಯುವಕರಿಗೆ ಕೌಶಲಾಧಾರಿತ ಶಿಕ್ಷಣದ ಮೂಲಕ ಉದ್ಯೋಗ ಹಾಗೂ ಸ್ವಾವಲಂಬಿ ಬದುಕಿನ ದಾರಿ ತೋರಿಸುವ ಉದ್ದೇಶದಿಂದ ಕುಂದಾಪುರ ತಾಲೂಕಿನ ಗುಡ್ಡೆಯಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಎಸ್‌ಕೆಎಫ್ ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್”ನಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.

ಡಾ. ಜಿ. ರಾಮಕೃಷ್ಣ ಆಚಾರ ಚಾರಿಟೇಬಲ್ ಟ್ರಸ್ಟ್ ಹಾಗೂ ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಸಂಸ್ಥೆಯ ಸಾಮಾಜಿಕ ಬದ್ಧತೆಯ ಭಾಗವಾಗಿ ಈ ತರಬೇತಿ ಕೇಂದ್ರವನ್ನು ಆರಂಭಿಸಲಾಗಿದ್ದು, ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತಾಂತ್ರಿಕ ತರಬೇತಿ ನೀಡಲಾಗುತ್ತಿದೆ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸಕ್ಕಿಂತ ಕೌಶಲಾಭಿವೃದ್ಧಿಯೇ ಉದ್ಯೋಗದ ಮುಖ್ಯ ಆಧಾರವಾಗುತ್ತಿರುವ ಹಿನ್ನೆಲೆಯಲ್ಲಿ, ಕೈಗಾರಿಕಾ ಕ್ಷೇತ್ರದ ಅಗತ್ಯಗಳಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ಉದ್ದೇಶದಿಂದ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಇಲ್ಲಿ ಆರಂಭಿಸಲಾಗಿದೆ.

ಕೇಂದ್ರದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌, ಮೆಕ್ಯಾನಿಕ್ – ರೆಫ್ರಿಜರೇಷನ್‌, ಎಸಿ ಮತ್ತು ಪ್ಲಂಬಿಂಗ್‌, ಫಿಟ್ಟಿಂಗ್ ಹಾಗೂ ಇತರೆ ತಾಂತ್ರಿಕ ವಿಭಾಗಗಳಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಜೊತೆಗೆ ಯುವತಿಯರ ಸ್ವಾವಲಂಬನೆಗೆ ನೆರವಾಗುವ ಉದ್ದೇಶದಿಂದ ಫ್ಯಾಷನ್ ಡಿಸೈನ್ ಕೋರ್ಸ್‌ನ್ನೂ ಆರಂಭಿಸಲಾಗಿದೆ.

ಪ್ರತಿ ವಿಭಾಗದಲ್ಲಿ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಬ್ಯಾಚ್‌ಗೆ 20 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಗಮನ ಹಾಗೂ ಗುಣಮಟ್ಟದ ತರಬೇತಿ ನೀಡುವ ದೃಷ್ಟಿಯಿಂದ ಈ ವ್ಯವಸ್ಥೆ ಜಾರಿಗೆ ತರಲಾಗಿದೆ.

ತಾಂತ್ರಿಕ ಕೋರ್ಸ್‌ಗಳ ಅವಧಿಯನ್ನು ಒಂದು ವರ್ಷವಾಗಿ ನಿಗದಿಪಡಿಸಲಾಗಿದ್ದು, ಫ್ಯಾಷನ್ ಡಿಸೈನ್ ಕೋರ್ಸ್ ಆರು ತಿಂಗಳ ಅವಧಿಯದ್ದಾಗಿರುತ್ತದೆ. ತರಬೇತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್‌, ಕೈಗಾರಿಕಾ ಅನುಭವ ಹಾಗೂ ಉದ್ಯೋಗ ಮಾರ್ಗದರ್ಶನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ವಿಶೇಷವಾಗಿ ಎಸ್ಸೆಸ್ಸೆಲ್ಸಿ ಪಾಸ್ ಅಥವಾ ಫೇಲ್ ಆದ ವಿದ್ಯಾರ್ಥಿಗಳು, ಪಿಯುಸಿ ಹಾಗೂ ಪದವೀಧರರಿಗೆ ಈ ತರಬೇತಿ ಕೇಂದ್ರ ಹೊಸ ಅವಕಾಶದ ಬಾಗಿಲು ತೆರೆದಿದೆ. ವಿದ್ಯಾಭ್ಯಾಸ ಮಧ್ಯದಲ್ಲಿ ನಿಂತ ಯುವಕರಿಗೂ ಕೌಶಲಾಭಿವೃದ್ಧಿಯ ಮೂಲಕ ಬದುಕು ಕಟ್ಟಿಕೊಳ್ಳುವ ಅವಕಾಶ ಒದಗಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ.

ಸಂಸ್ಥೆಯ ಮುಖ್ಯಸ್ಥರಾದ ಡಾ. ಜಿ. ರಾಮಕೃಷ್ಣ ಆಚಾರ್ ಅವರು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಉಚಿತ ತರಬೇತಿ ಮತ್ತು ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಸಮಾಜ ಸೇವೆಯ ಹೊಸ ಮಾದರಿಯನ್ನು ರೂಪಿಸಿದ್ದಾರೆ. “ಶಿಕ್ಷಣದ ಜೊತೆಗೆ ಉದ್ಯೋಗ ಸಿಗಬೇಕು; ಯುವಕರು ಸ್ವಾವಲಂಬಿಗಳಾಗಬೇಕು” ಎಂಬ ಆಶಯದೊಂದಿಗೆ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 91874 92550 ಸಂಖ್ಯೆಯನ್ನು ಸಂಪರ್ಕಿಸಿ ದಾಖಲಾತಿ ಮಾಡಿಸಿಕೊಳ್ಳಬಹುದಾಗಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions