Advertisement

ಉಡುಪಿ | NSS ಶಿಬಿರದಲ್ಲಿ HRS ವತಿಯಿಂದ ಅಗ್ನಿಶಾಮಕ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಮಾಹಿತಿ ಕಾರ್ಯಕ್ರಮ

ಉಡುಪಿಯ ವೈಕುಂಠ ಬಾಳಿಗ ಕಾನೂನು ಕಾಲೇಜಿನ

ಎನ್‌ಎಸ್‌ಎಸ್ ಶಿಬಿರದಲ್ಲಿ ಎಚ್‌ಆರ್‌ಎಸ್ ಕರಾವಳಿ ವಲಯದ ಕ್ಯಾಪ್ಟನ್ ಮುನೀರ್ ಪಾದ್ರಂಗಿ ಅವರ ನೇತೃತ್ವದಲ್ಲಿ ಅಗ್ನಿಶಾಮಕ ಹಾಗೂ ಪ್ರಥಮ ಚಿಕಿತ್ಸೆ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಅಗ್ನಿಶಾಮಕ ಉಪಕರಣಗಳ ಬಳಕೆ, ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆ ಹಾಗೂ ಪ್ರಥಮ ಚಿಕಿತ್ಸೆ ನೀಡುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ತಾತ್ವಿಕ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ತರಬೇತುದಾರರಾದ ಸಲೀಂ, ಜುಬೇರ್ ಹಾಗೂ ಬಿಲಾಲ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ವಿವಿಧ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಬಗ್ಗೆ ತರಬೇತಿ ನೀಡಿದರು.

ಶಿಬಿರದಲ್ಲಿ ಭಾಗವಹಿಸಿದ್ದ ಎನ್‌ಎಸ್‌ಎಸ್ ಸ್ವಯಂಸೇವಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions