Advertisement

ಉಡುಪಿ : ಕಾಂಗ್ರೆಸ್ ವತಿಯಿಂದ ‘ಜೈ ಬಾಪೂ – ಜೈ ಭೀಮ್ – ಜೈ ಸಂವಿಧಾನ’ ಕಾರ್ಯಕ್ರಮ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಆಶ್ರಯದಲ್ಲಿ, ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ‘ಜೈ ಬಾಪೂ – ಜೈ ಭೀಮ್ – ಜೈ ಸಂವಿಧಾನ’ ಕಾರ್ಯಕ್ರಮವು ಇಂದು ಪುರಭವನ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಿನಯ್ ಕುಮಾರ್ ಸೊರಕೆ, ‘ಗಾಂಧಿ ಭಾರತ’ ಎಂಬ ಕಾರ್ಯಕ್ರಮವು ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ ನಡೆಸಿದ ಕಾಂಗ್ರೆಸ್ ಅಧಿವೇಶನದ 100 ವರ್ಷಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಕೈಗೊಳ್ಳಲಾಗುತ್ತಿದ್ದು, ಕಾರ್ಯಕ್ರಮದ ಮಹತ್ವ ಮತ್ತು ಉದ್ದೇಶವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ, ಪಕ್ಷದ ಮುಖಂಡರು ಹಾಗೂ ಕನ್ನಡ ಚಿತ್ರ ನಿರ್ಮಾಪಕರಾದ ಎಸ್. ನಾರಾಯಣ್, ಸುಧೀರ್ ಕುಮಾರ್ ಮರೋಳಿ, ಹರಿಶ್ ಕಿಣಿ, ಮುನೀರ್ ಜನ್ಸಾಲೆ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಮೇಶ್ ಕಾಂಚನ್, ಶರ್ಪುದ್ದೀನ್ ಶೇಖ್, ದಿನಕರ್ ಹೇರೂರ್, ವೈ. ಸುಕುಮಾರ್, ಸುಬೋದ್ ರಾವ್, ಪ್ರಶಾಂತ್ ಜತ್ತನ್ನ, ವೆರೋನಿಕಾ ಕರ್ನಾಲಿಯೋ, ರಮೀಜ್ ಹುಸೈನ್, ನಿಯಾಜ್ ಅಹಮ್ಮದ್, ರಿಯಾಜ್ ಮುದರಂಗಡಿ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions