Advertisement

ಉಡುಪಿ: ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳವು ಪ್ರಕರಣ: ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳ್ಳರ ಬಂಧನ

ಉಡುಪಿ: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ.

ತಮಿಳುನಾಡು ರಾಜ್ಯದ ತಿರುನಲ್ವೇಲಿ ತಿರುಕ್ಕುರುಂಕುಡಿಯ ಎಸಾಕ್ಕಿ ರಾಜ (28) ಹಾಗೂ ಆತನ ಸಹಚರ ನಂಬಿ ರಾಜ (23) ಬಂಧಿತ ಆರೋಪಿಗಳು.

ಕಾಪು ದಿವಾಕರ ಶೆಟ್ಟಿ ಕುಟುಂಬದವರು ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆಯಲ್ಲಿರುವ ಮನೆಗೆ ಬೀಗ ಹಾಕಿ ಮುಂಬಯಿಗೆ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯ ಮುಖ್ಯ ಬಾಗಿಲ ಬೀಗವನ್ನು ಒಡೆದು ನುಗ್ಗಿದ ಕಳ್ಳರು, ದೇವರ ಕೋಣೆಯಲ್ಲಿದ್ದ ಮತ್ತು ಬೆಡ್‌ರೂಂನ ಕಪಾಟಿನಲ್ಲಿದ್ದ ಬೆಳ್ಳಿ ಹಾಗೂ 30 ಗ್ರಾಂ ತೂಕದ ಕರಗಿಸಿದ ಗಟ್ಟಿ ಚಿನ್ನ, ವಾಚ್ ಹಾಗೂ ನಗದು ಸೇರಿ ಒಟ್ಟು 19,05,000ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಕುಖ್ಯಾತ ಅಂತರ್ ರಾಜ್ಯ ಕಳ್ಳವು ಆರೋಪಿ ಎಸಾಕ್ಕಿ ರಾಜಾ ಮತ್ತು ಆತನ ಸಹಚರ ನಂಬಿ ರಾಜ ಎಂಬಾತನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉಳಿದ ಪ್ರಮುಖ ಮೂರು ಆರೋಪಿಗಳು ಭಾಗಿಯಾಗಿದ್ದು, ಇವರನ್ನು ಪತ್ತೆ ಹಚ್ಚಿ, ಸೊತ್ತು ವಶಪಡಿಸಿಕೊಳ್ಳಲು ಬಾಕಿ ಇದೆ. ಈ ಆರೋಪಿಗಳ ವಿರುದ್ಧ ಕೇರಳ ಮತ್ತು ತಮಿಳುನಾಡು ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions