Advertisement

ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯ NSS ವಿಶೇಷ ಶಿಬಿರಕ್ಕೆ ಚಾಲನೆ

ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕ 1 ಮತ್ತು 2 ವತಿಯಿಂದ 2025-26 ನೇ ಸಾಲಿನ ವಿಶೇಷ ಶಿಬಿರವು ಬ್ರಹ್ಮಾವರ ತಾಲೂಕಿನ ಗೋಳಿಯಂಗಡಿಯ ಸ.ಪ.ಪೂ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಆರಂಭಗೊಂಡಿತು.

ಕಾರ್ಯಕ್ರಮವನ್ನು ಬೆಳ್ವೆಯ ರಾಧಿಕಾ ಕ್ಯಾಶ್ಯೂಸ್ ಸಂಸ್ಥೆಯ ಉದ್ಯಮಿ ಶ್ರೀ ರಾಜೇಂದ್ರ ಕಿಣಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಳ್ಳಬೇಕು. NSS ಶಿಬಿರಗಳು ಯುವಕರಲ್ಲಿ ನಾಯಕತ್ವ, ಶಿಸ್ತು, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಹೇಳಿದರು.

NSS ಅಧಿಕಾರಿಯಾದ ಡಾ. ನವೀನ್ ಚಂದ್ರ ಸಿಬಿ ಪ್ರಸ್ತಾವಿಕ ನುಡಿಗಳನ್ನಾಡಿ, ಶಿಬಿರದ ಉದ್ದೇಶ, ಗ್ರಾಮಾಭಿವೃದ್ಧಿ ಕಾರ್ಯಗಳು ಹಾಗೂ ವಾರಪೂರ್ತಿ ನಡೆಯಲಿರುವ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುರೇಖಾ ಕೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಬದುಕಿನ ಅರಿವು ಪಡೆದು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜು ಗೋಳಿಯಂಗಡಿಯ ಪ್ರಾಂಶುಪಾಲರಾದ ಶ್ರೀ ಮಂಜುನಾಥ್ ಪಟಗಾರ ಹಾಗೂ ಶ್ರೀ ಜಯರಾಮ ಶೆಟ್ಟಿ ಮಾತನಾಡಿ, NSS ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿದ್ದು, ಸೇವೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ನೆರವಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಶಿಬಿರದ ಅವಧಿಯಲ್ಲಿ ಸ್ವಚ್ಛತಾ ಅಭಿಯಾನ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ಜಾಗೃತಿ, ಬೀದಿ ನಾಟಕ, ಪರಿಸರ ಸಂರಕ್ಷಣೆ ಹಾಗೂ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

NSS ಕಾರ್ಯದರ್ಶಿಗಳಾದ ಸಮೀರ್ ಸ್ವಾಗತಿಸಿದರು. ಅಂಕಿತ ವಂದಿಸಿದರು ಹಾಗೂ ರಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲೆ ಡಾ. ಪ್ರೀತಿ ಹರೀಶ್ ರಾಜ್, ಐಕ್ಯೂಎಸಿ ಸಂಯೋಜನಾಧಿಕಾರಿ ಡಾ. ಜಯಮೋಲ್ ಪಿ.ಎಸ್., NSS ಸಂಯೋಜನಾಧಿಕಾರಿ ಶ್ರೀ ಅಮೋಘ ಗಾಡ್ಕರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, NSS ಘಟಕದ ಕಾರ್ಯದರ್ಶಿ ಸಂದೇಶ್ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions